ಕೋಸ್ಟಲ್ ಟಾಕ್ ನ್ಯೂಸ್ | ಬೆಳ್ತಂಗಡಿ
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ದೇಹದ ಬುರುಡೆಯೊಂದು ಪತ್ತೆಯಾಗಿದೆ. ನವೆಂಬರ್ 12ರಂದು ಸಂಜೆ ಈ ಘಟನೆ ಬೆಳಕಿಗೆ ಬಂದಿದೆ.
ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ವಿದ್ಯುತ್ ಕಂಬಗಳಿಗೆ ಅಡ್ಡಲಾಗಿದ್ದ ಮರದ ರೆಂಬೆಗಳನ್ನು ಕತ್ತರಿಸುವ ಕೆಲಸದಲ್ಲಿ ತೊಡಗಿದ್ದಾಗ, ಹೆದ್ದಾರಿ ಬದಿಯಲ್ಲಿ ಬುರುಡೆ ಕಾಣಿಸಿಕೊಂಡಿದೆ. ಈ ಕುರಿತು ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಅರ್ಜಿ ಸಲ್ಲಿಸಿದ್ದಾರೆ.
ದೂರರ್ಜಿಯನ್ನು ಪೊಲೀಸರು ಸ್ವೀಕರಿಸಿದ್ದು, ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬುರುಡೆ ಯಾರದ್ದು ಹಾಗೂ ಇತರ ವಿವರಗಳು ತನಿಖೆಯಿಂದ ತಿಳಿದುಬರಬೇಕಿದೆ.