ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು 

ಮಂಗಳೂರು ನಗರದ ವಿವಿಧ ವಾರ್ಡ್‌ಗಳಲ್ಲಿನ ಸ್ಥಳೀಯ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ನಾಗರಿಕರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಮಹಾನಗರಪಾಲಿಕೆಯು ಪ್ರತಿ ತಿಂಗಳು ‘ವಾಕ್ ವಿತ್ ಕಮಿಷನರ್’ ಕಾರ್ಯಕ್ರಮ ಆಯೋಜಿಸುತ್ತದೆ. ಈ ತಿಂಗಳ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಸುರತ್ಕಲ್‌ನ ಹೊಸಬೆಟ್ಟು ವಾರ್ಡ್ ಸಂಖ್ಯೆ 8ರಲ್ಲಿ ನಡೆಯಲಿದೆ. ಈ ಕುರಿತು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.