ಕೋಸ್ಟಲ್ ಟಾಕ್ ನ್ಯೂಸ್ | ನವದೆಹಲಿ
ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ ಭಾರತದ ಪ್ಯಾರಾ ಕ್ರೀಡಾಪಟುಗಳು ಸಾಧಿಸಿದ ಅಸಾಧಾರಣ ಯಶಸ್ಸನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಶ್ಲಾಘಿಸಿದ್ದಾರೆ.
ದಾಖಲೆಯ 114 ಪದಕಗಳನ್ನು ಗೆಲ್ಲುವ ಮೂಲಕ ಭಾರತವು ಕ್ರೀಡಾಕೂಟದಲ್ಲಿ ತನ್ನ ಅತ್ಯುತ್ತಮ ಪ್ರದರ್ಶನ ನೀಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಇದು ಇಡೀ ದೇಶಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ತಂಡದ ಪ್ರತಿಯೊಬ್ಬ ಕ್ರೀಡಾಪಟುವಿಗೂ ಅವರ ಅಸಾಧಾರಣ ದೃಢಸಂಕಲ್ಪಕ್ಕಾಗಿ ಅಭಿನಂದನೆ ಸಲ್ಲಿಸಿದ ಪ್ರಧಾನಿ, ಈ ಐತಿಹಾಸಿಕ ಸಾಧನೆಗೆ ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. ಅವರ ಸಾಧನೆಗಳು ಅಸಂಖ್ಯಾತ ಭಾರತೀಯರಿಗೆ ಸ್ಫೂರ್ತಿ ನೀಡಿವೆ ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ ನಮ್ಮ ಪ್ಯಾರಾ ಕ್ರೀಡಾಪಟುಗಳು ಸಾಧಿಸಿದ ಅಸಾಧಾರಣ ಯಶಸ್ಸು ಇದು!
ದಾಖಲೆಯ 114 ಪದಕಗಳೊಂದಿಗೆ ಭಾರತವು ಕ್ರೀಡಾಕೂಟದಲ್ಲಿ ತನ್ನ ಅತ್ಯುತ್ತಮ ಪ್ರದರ್ಶನ ದಾಖಲಿಸಿದೆ. ಇದು ಇಡೀ ದೇಶಕ್ಕೆ ಅಪಾರ ಹೆಮ್ಮೆ ಮತ್ತು ಸಂತೋಷದ ಕ್ಷಣವಾಗಿದೆ. ನಮ್ಮ ತಂಡದ ಪ್ರತಿಯೊಬ್ಬ ಸದಸ್ಯರ ಅಸಾಧಾರಣ ದೃಢಸಂಕಲ್ಪವನ್ನು ನಾನು ಅಭಿನಂದಿಸುತ್ತೇನೆ” ಎಂದು ತಿಳಿಸಿದ್ದಾರೆ.