ಕೋಸ್ಟಲ್ ಟಾಕ್ ನ್ಯೂಸ್ | ಕಾಪು 

ಕಾಪು ವಿಧಾನಸಭಾ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರದ 30 ಹಾಸಿಗೆಯ ಹೊಸ ಕಟ್ಟಡ ನಿರ್ಮಾಣಕ್ಕೆ ರಾಷ್ಟ್ರೀಯ ಆಯೋಗ ಅಭಿಯಾನ 15ನೇ ಹಣಕಾಸು ಆಯೋಗದಿಂದ ರೂ. 5 ಕೋಟಿ 75 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ರಂದು ಆರೋಗ್ಯ ಸಚಿವರಾದ ಯು.ಟಿ ಖಾದರ್ ಹಾಗೂ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. 

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಫೂರ್, ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ವಿನಯ್ ಕುಮಾರ್ ಸೊರಕೆ, ಕಾಪು ಪುರಸಭೆಯ ಸದಸ್ಯರು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಉಪಸ್ಥಿತರಿದ್ದರು.