ಕಾರವಾರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಪಖವಾಡ ಆಚರಣೆ
ಕೋಸ್ಟಲ್ ಟಾಕ್ ನ್ಯೂಸ್ | ಕಾರವಾರ
ಕೊಂಕಣ್ ರೈಲ್ವೆಯಿಂದ ಸ್ವಚ್ಛತಾ ಪಖವಾಡ ಸ್ವಚ್ಛತಾ ಜಾಗೃತಿ ಅಭಿಯಾನದ ಅಂಗವಾಗಿ ಕಾರವಾರ ರೈಲ್ವೆ ನಿಲ್ದಾಣದಲ್ಲಿ ಸಮಗ್ರ ಸ್ವಚ್ಛತಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಯಿತು.
ಹಿರಿಯ ವಿಭಾಗೀಯ ಇಂಜಿನಿಯರ್ ಉದಯ ಭಾಸ್ಕರ್ ಹಾಗೂ ಹಿರಿಯ ವಾಣಿಜ್ಯ ಮೇಲ್ವಿಚಾರಕ ಸತ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ ಈ ಅಭಿಯಾನ ನಡೆಯಿತು. ಇಂಜಿನಿಯರಿOಗ್ ಮತ್ತು ವಾಣಿಜ್ಯ ವಿಭಾಗದ ಸಿಬ್ಬಂದಿ ಸೇರಿದಂತೆ ಒಟ್ಟು 32 ಮಂದಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಕಾರವಾರ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರ, ಆವರಣ , ವಾಹನ ನಿಲುಗಡೆ ಸ್ಥಳ ಹಾಗೂ ಸಂಪರ್ಕ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಸುಮಾರು 70 ಚೀಲಗಳಲ್ಲಿ (ಅಂದಾಜು 1500 ಕೆ.ಜಿ) ಸಂಗ್ರಹವಾದ ಕಸವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲಾಯಿತು. ಪ್ರಯಾಣಿಕರಿಗೆ ಸ್ವಚ್ಛ ಹಾಗೂ ನೈರ್ಮಲ್ಯಯುತ ವಾತಾವರಣವನ್ನು ಒದಗಿಸಲು ಕೊಂಕಣ್ ರೈಲ್ವೆ ಸದಾ ಬದ್ಧವಾಗಿದೆ ಎಂದು ಕೊಂಕಣ ರೈಲ್ವೆಯ ಮಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ. ಸುಧಾ ಕೃಷ್ಣಮೂರ್ತಿ ತಿಳಿಸಿದ್ದಾರೆ.