ದಸರಾ ಕಡೆಗಣನೆ: ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು


ದಸರಾ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆ ಆಯೋಜಿಸಿರುವ ಮಂಗಳೂರಿನ ಬೆಂದೋರ್ ವೆಲ್ ಬಳಿಯ ಸೈಂಟ್ ಆಗ್ನೆಸ್ ಕಾಲೇಜ್ ನ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 12 ರಿಂದ 28 ರ ವರೆಗೆ ಪರೀಕ್ಷೆ ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜಿಗೆ ಎದುರು ಪ್ರತಿಭಟನೆ ನಡೆಸಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ನಿಗದಿಪಡಿಸಿರುವುದಕ್ಕೆ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲಿ ನೀಡಿದೆ.


ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದರೂ ಸೈನ್ಟ್ ಆಗ್ನೆಸ್ ಕಾಲೇಜಿನ ಆಡಳಿತ ಮಂಡಳಿ ಸ್ಪಂದಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ವಿದ್ಯಾರ್ಥಿ ಸಂಘಟನೆಗಳು ದೂರು ನೀಡಿದೆ.