ಕೋಸ್ಟಲ್ ಟಾಕ್ ನ್ಯೂಸ್ | ಮಂಗಳೂರು 

ವೈಯಕ್ತಿಕ ಕಾರಣಗಳಿಂದ ಮನನೊಂದ ಉಡುಪಿ ಮೂಲದ ಮಹಿಳೆಯೊಬ್ಬರು ಸುಬ್ರಹ್ಮಣ್ಯದ ಕುಮಾರಧಾರಾ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನವೆಂಬರ್ 4ರಂದು ರಾತ್ರಿ ನಡೆದಿದೆ. ಈ ವೇಳೆ ನದಿಯಲ್ಲಿದ್ದ ಮೊಸಳೆ ಮಹಿಳೆಗೆ ಕಚ್ಚಿದ್ದು, ಸಣ್ಣ ಪ್ರಮಾಣದ ಗಾಯಗಳಾಗಿವೆ. ಮಹಿಳೆಯ ಬೊಬ್ಬೆ ಕೇಳಿದ ಸಮೀಪದ ಲಾಡ್ಜ್‌ನ ಸಿಬ್ಬಂದಿ ತಕ್ಷಣ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾರ್ವಜನಿಕರ ಸಹಕಾರದೊಂದಿಗೆ ಮಹಿಳೆಯನ್ನು ರಕ್ಷಿಸಿದ್ದಾರೆ. 

ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ನಂತರ ಆಕೆಯ ಕುಟುಂಬದವರನ್ನು ಕರೆಸಿ ಅವರೊಂದಿಗೆ ಮನೆಗೆ ಕಳುಹಿಸಿಕೊಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.